ವಿಜಯಪುರ;ಚುನಾವಣೆ ದಿನ ವಿಜಯಪುರದಲ್ಲಿ ಭಾರೀ ಹೈಡ್ರಾಮವೇ ನಡೆದಿದೆ.ಹೆಚ್ಚುವರಿ ಮತಯಂತ್ರ ಸಾಗಾಟ ಮಾಡುತ್ತಿದ್ದ ಅಧಿಕಾರಿಗಳನ್ನು ತಡೆದ ಜನ ಮತಯಂತ್ರಗಳನ್ನು ಪುಡಿಪುಡಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ಮತದಾನ ಪ್ರಕ್ರಿಯೆ ಅರ್ಧಕ್ಕೆ ಸ್ಥಗಿತಗೊಳಿಸಿ ಮತಯಂತ್ರ ಕೊಂಡೊಯ್ಯುತ್ತಿದ್ದಾರೆ ಎಂದು ತಪ್ಪಾಗಿ ಭಾವಿಸಿ ಹಲ್ಲೆ ನಡೆದಿದೆ ಎನ್ನಲಾಗಿದೆ.
ಮಸಬಿನಾಳ ಗ್ರಾಮದಲ್ಲಿ ಚುನಾವಣಾ ಅಧಿಕಾರಿಗಳು ಮತಯಂತ್ರಗಳನ್ನು ಅರ್ಧಕ್ಕೆ ತೆಗೆದುಕೊಂಡು ಹೋಗುತ್ತಿರುವುದನ್ನು ಕಂಡು ಗ್ರಾಮಸ್ಥರು ಚುನಾವಣಾ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ.
ಆದರೆ, ಚುನಾವಣಾ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡಲ್ಲ ಎನ್ನಲಾಗಿದೆ. ಹೆಚ್ಚುವರಿ ಯಂತ್ರಗಳು ಎಂದು ಹೇಳಿದ್ದಾರೆ ಆದರೆ ಇದನ್ನು ಕೇಳದೆ ಈ ಎಲ್ಲ ಮತಯಂತ್ರಗಳನ್ನು ಅರ್ಧಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಗಲಾಟೆ ಆರಂಭಿಸಿದ್ದಾರೆ. ವಾಗ್ವಾದ ಮಾಡಿ ಅಧಿಕಾರಿಗಳನ್ನು ಥಳಿಸಿ ಮತಯಂತ್ರಗಳನ್ನು ಕಿತ್ತುಕೊಂಡಿದ್ದಾರೆ. ಗ್ರಾಮಸ್ಥರೆಲ್ಲರೂ ಸೇರಿ, ಮತಯಂತ್ರಗಳನ್ನು ಒಡೆದು ಹಾಕಿದ್ದಾರೆ.
ಇನ್ನು ಚುನಾವಣಾ ಅಧಿಕಾರಿಗಳು ಇವಿಎಂ ಮಷೀನ್‌ಗಳನ್ನು ಕಾರಿನಲ್ಲಿ ಇಟ್ಟುಕೊಂಡು ಓಡಾಡುವುದನ್ನು ನೋಡಿದ ಸಿಬ್ಬಂದಿಗಳನ್ನು ತಪ್ಪು ಭಾವಿಸಿ ಇವಿಎಂ, ವಿವಿಪ್ಯಾಟ್ ಮಷೀನ್‌ಗನ್ನು ಒಡೆದು ಹಾಕಿದ್ದಾರೆ.ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.