ಮಾರಕಾಸ್ತ್ರಗಳಿಂದ ಕೊಚ್ಚಿ ಯುವತಿಯ ಬರ್ಬರವಾಗಿ ಕೊಲೆ

ವಿಜಯಪುರ;ಮಾರಕಾಸ್ತ್ರಗಳಿಂದ ಕೊಚ್ಚಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂಡಿ ತಾಲೂಕಿನ ಹಳಗುಣಕಿ ಹೊರವಲಯದಲ್ಲಿ ನಡೆದಿದೆ.




ಪಲ್ಲವಿ ವಠಾರ್(26)ಕೊಲೆಯಾದ ಯುವತಿ.

ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯಲಿದೆ.ಘಟನೆಯಿಂದ ಯುವತಿಯ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ‌.




ಯವತಿಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ.







ಟಾಪ್ ನ್ಯೂಸ್