ಕೋಟ; ಸಾಂಬಾರಿಗೆ ಗಾಜಿನ ಚೂರು ಹಾಕಿ ಸಂಬಂಧಿಕರ ಕೊಲೆಗೆ ಯತ್ನಿಸಿದ ಯುವಕ!

ಕೋಟ:ಸಾಂಬಾರಿಗೆ ಗಾಜಿನ ಚೂರುಗಳನ್ನು ಹಾಕಿ ಯುವಕನೋರ್ವ ಸಂಬಂಧಿಕರ ಕೊಲೆಗೆ ಯತ್ನಿಸಿದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋಟತಟ್ಟು ಪಡುಕೆರೆ ನಿವಾಸಿ ವಿಜೇಂದ್ರ (28) ಬಂಧಿತ ಆರೋಪಿ.

ಮಾ.12ರಂದು ಗೀತಾ ಮನೆಯವರು ಊಟ ಮಾಡುವಾಗ ಅನ್ನದಲ್ಲಿ ಹಾಗೂ ಸಾಂಬಾರಿನಲ್ಲಿ ಗಾಜಿನ ಚೂರುಗಳು ಕಂಡು ಬಂದಿದ್ದವು.ಮಾ.15 ಮತ್ತು 18ರಂದು ರಾತ್ರಿ ಊಟ ಮಾಡುವಾಗ ಮತ್ತೆ ಅನ್ನದಲ್ಲಿ ಗಾಜಿನ ಚೂರುಗಳು ಸಿಕ್ಕಿದವು.ಈ ಮೂರೂ ದಿನವೂ ವಿಜೇಂದ್ರ ಗೀತಾ ಅವರ‌ ಮೆನೆಗೆ ಬಂದಿದ್ದ ಎನ್ನಲಾಗಿದೆ.

ಈ ಬಗ್ಗೆ ವಿಜೇಂದ್ರ ಮೇಲೆ ಸಂಶಯಗೊಂಡ ಗೀತಾ ಮನೆಯವರು ಅಡುಗೆ ಮನೆಯಲ್ಲಿ ಮೊಬೈಲ್ ಕ್ಯಾಮೆರಾವನ್ನು ಅಡಗಿಸಿ ಇಟ್ಟು ರೆಕಾರ್ಡ್ ಮಾಡಿದ್ದರು.ವಿಜೇಂದ್ರ ಎ.17ರಂದು ಸಂಜೆ ಗೀತಾ ಅವರ ಮನೆಗೆ ಬಂದಿದ್ದು, ನೀರು ಕುಡಿಯುವ ನೆಪದಲ್ಲಿ ಅಡುಗೆ ಮನೆಗೆ ಹೋಗಿ ಸಾಂಬಾರಿಗೆ ಗಾಜಿನ ಚೂರುಗಳನ್ನು ಹಾಕಿದ್ದನು. ಈ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com