ವಿಜಯಲಕ್ಷ್ಮಿ ಶಿಬರೂರು ಅವರಿಗೆ ಅತ್ಯುತ್ತಮ ವರದಿಗೆ ಬಿ.ಎಸ್.ವೆಂಕಟರಾಂ ಪ್ರಶಸ್ತಿ

ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಿದ್ದು,ವಿಜಯಟೈಮ್ಸ್‌ ಸಂಪಾದಕರಾಗಿರುವ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಕೆಯುಡಬ್ಲ್ಯೂಜೆಯ ಅತ್ಯುತ್ತಮ ಸ್ಕೂಪ್ ವರದಿಗೆ ಬಿ.ಎಸ್.ವೆಂಕಟರಾಂ ಪ್ರಶಸ್ತಿ ಲಭಿಸಿದೆ.

ವಿಜಯಪುರದಲ್ಲಿ ಫೆಬ್ರವರಿ 4 ಮತ್ತು 5ರಂದು ನಡೆಯಲಿರುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಪತ್ರಿಕೋದ್ಯಮದ ವಿವಿಧ ವಿಭಾಗಗಳಲ್ಲಿ ವಿಶೇಷ ಸೇವೆ ಸಲ್ಲಿಸಿದ, ವಿಶೇಷ ಸಾಧನೆ ಮೆರೆದಿರುವವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.ವಿಜಯಲಕ್ಷ್ಮಿ ಸೇರಿ ಹಲವು ಪತ್ರಕರ್ತರಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಟಾಪ್ ನ್ಯೂಸ್