20 ವರ್ಷದ ಯುವಕನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ

ಉತ್ತರಪ್ರದೇಶ;ಪ್ರತಾಪ್‌ಗಢ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಅತರ್ಸುಯಿ ಬದ್ಲಿ ಕಾ ಪೂರ್ವಾ ಗ್ರಾಮದಲ್ಲಿ ಬುಧವಾರ ರಾತ್ರಿ ಬಾಘರೈ ಪೊಲೀಸ್ ಠಾಣೆ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿ ವಿಶಾಲ್ ಪಾಂಡೆ ಎಂಬಾತನನ್ನು ಅಪರಿಚಿತರು ಕಾರಿನಿಂದ ಡಿಕ್ಕಿ ಹೊಡೆದು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್ ನಾಥ್ ಗುಪ್ತಾ ತಿಳಿಸಿದ್ದಾರೆ.

ಮೃತರ ಕುಟುಂಬದವರ ದೂರಿನ ಮೇರೆಗೆ ಗ್ರಾಮದ ಮಾಜಿ ಮುಖ್ಯಸ್ಥ ರಂಗ್ ಬಹದ್ದೂರ್ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತರ ಕುಟುಂಬ ಹಾಗೂ ಆರೋಪಿಗಳ ನಡುವಿನ ಹಳೆ ದ್ವೇಷವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ.

ಪ್ರಕರಣದಲ್ಲಿ ಎಸ್ಪಿ ಸತ್ಪಾಲ್ ಅಂತಿಲ್ ಅವರು ನಿರ್ಲಕ್ಷತನ ತೋರಿದ್ದಕ್ಕಾಗಿ ಠಾಣೆಯ ಪ್ರಭಾರಿ ಅವನ್ ದೀಕ್ಷಿತ್ ಅವರನ್ನು ಅಮಾನತುಗೊಳಿಸಿದ್ದಾರೆ.

ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.ಮೃತರ ತಂದೆ ಉಮೇಶ್ ಪಾಂಡೆ ಹಿಂದಿ ಪತ್ರಿಕೆಯೊಂದರಲ್ಲಿ ಸ್ಥಳೀಯ ಪತ್ರಕರ್ತರಾಗಿದ್ದಾರೆ.

ಟಾಪ್ ನ್ಯೂಸ್