ಬಂಟ್ವಾಳ:ದ್ವಿಚಕ್ರ ವಾಹನದಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕನ್ಯಾನದ ಅಬೂಬಕ್ಕರ್ ಬಂಧಿತ ಆರೋಪಿ ಎನ್ನಲಾಗಿದೆ.
ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿತ್ತು.ಈ ಕುರಿತು ಸಿಸಿಟಿವಿ ದೃಶ್ಯಾಧರಿಸಿ ಆರೋಪಿಯ ಬಂಧನ ನಡೆದಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಕೂಡಲೇ ಬಂಧಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ರವರು ವಿಟ್ಲ ಠಾಣಾ ಪೊಲೀಸರಲ್ಲಿ ಮನವಿ ಮಾಡಿದ್ದರು.
ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿ, ಆರೋಪಿಯನ್ನು ತಕ್ಷಣ ಬಂಧಿಸಲು ಆಗ್ರಹಿಸಿದ್ದರು.
ಇದೀಗ ಆರೋಪಿಯ ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.