ಪುತ್ತೂರು:ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ.
ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ(20) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯೂ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ಗುರುತಿಸಲಾಗಿದೆ.
ಈತ ಜೆಸಿಬಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.