ವಿಟ್ಲ; ಅನ್ಯಕೋಮಿನ ಯುವತಿ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತನೆ ಆರೋಪ, ದೂರು ದಾಖಲು, ಪೊಲೀಸ್ ಠಾಣೆಗೆ ಬಿಜೆಪಿಯ ಆಶಾ ತಿಮ್ಮಪ್ಪಗೌಡ ಭೇಟಿ

ಬಂಟ್ವಾಳ:ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಎಂಬಲ್ಲಿಂದ ಕೇಳಿ ಬಂದಿದೆ.

ವಿಟ್ಲ ಕಸಬ ಗ್ರಾಮದ ಕಡಂಬು ಸಮೀಪದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಅನ್ಯಕೋಮೀನ ಯುವತಿಯ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಕೂಡಲೇ ಬಂಧಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ರವರು ವಿಟ್ಲ ಠಾಣಾ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ.ಈ ಕುರಿತು ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿ, ಆರೋಪಿಯನ್ನು ತಕ್ಷಣ ಬಂಧಿಸಲು ಆಗ್ರಹಿಸಿದ್ದಾರೆ.

ಈ ಕುರಿತು ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com