ಬಂಟ್ವಾಳ;ಬಿಜೆಪಿ, ಬಜರಂಗದಳದ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಜಂಕ್ಷನ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಕಾಂಗ್ರೆಸ್ ಕಾರ್ಯಕರ್ತ ಮಹಾಲಿಂಗ ನಾಯ್ಕ ಅವರು ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಚುನಾವಣಾ ಫಲಿತಾಂಶದ ದಿನ ಕೂಡ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.ಇದರ ಮುಂದುವರಿದ ಭಾಗವಾಗಿ ಗಲಾಟೆ ನಡೆದಿದೆ ಎನ್ನಲಾಗಿದೆ.
ಈ ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆಸಲಾಗಿದೆ ಎಂಬ ಸಂದೇಶ ಹರಿದಾಡುತ್ತಿದ್ದು, ಈ ಬಗ್ಗೆ ದ.ಕ ಎಸ್ಪಿ ಸ್ಪಷ್ಟನೆ ನೀಡಿ, ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರ್ ನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ. ಸದರಿ ಗಲಾಟೆಯಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ತಲವಾರು ದಾಳಿ ಎಂಬುವುದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದಾರೆ.