ವಿಟ್ಲ; ಮನೆಗೆ ಆಕಸ್ಮಿಕವಾಗಿ ಬೆಂಕಿ, ಗ್ಯಾಸ್ ಸಿಲಿಂಡರ್ ಸ್ಪೋಟಕ್ಕೆ ಬೆಚ್ಚಿಬಿದ್ದ ಜನ

ವಿಟ್ಲ;ಮನೆಯೊಂದಕ್ಕೆ ಬೆಂಕಿ ತಗುಲಿ‌ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಮಾಣಿ ಕಾಪಿಕಾಡು ಬಳಿ ನಡೆದಿದೆ.

ದೀಪಾ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದೆ.ದೀಪಾ ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಸಿಲಿಂಡರ್ ಸ್ಪೋಟದ ಶಬ್ಧದಿಂದ ಜನರು ಕೆಲ ಕಾಲ ಆತಂಕಿತರಾಗಿದ್ದರು.

ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ತೆರಳಿ ಬೆಂಕಿ‌ ನಂದಿಸುವ ಕೆಲಸವನ್ನು ಮಾಡಿದ್ದಾರೆ.

ಟಾಪ್ ನ್ಯೂಸ್