ವಿಟ್ಲ: ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ನಡೆದು ವಿಟ್ಲದ ನಿವಾಸಿ ಯುವಕ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ವಿಟ್ಲದ ಉಕ್ಕುಡ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಮೃತ ಯುವಕ.
ಹಬೀಬ್ ಕೆಲಸದ ನಿಮಿತ್ತ ಮೂರು ತಿಂಗಳ ಹಿಂದೆಯ ವಿದೇಶಕ್ಕೆ ಕೆಲಸಕ್ಕೆ ತೆರಳಿದ್ದರು. ಹಬೀಬ್ ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಹೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಬೀಬ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಇತ್ತ ರಂಝಾನ್ ಸಂಭ್ರಮದಲ್ಲಿದ್ದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.
ಇದೀಗ ಮೃತದೇಹವನ್ನು ಸೌದಿಯ ಆಸ್ಪತ್ರೆಯಲ್ಲಿರಿಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.