ವಿಟ್ಲ; ಜಾತ್ರೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ, ಓರ್ವನ ಬಂಧನ

ವಿಟ್ಲ:ಪ್ರಸಿದ್ಧ ವಿಟ್ಲ ಜಾತ್ರೆ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಓರ್ವ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ಗಣೇಶ್‌ ಕಡಂಬು, ಮಂಜುನಾಥ ಸೇರಿ ಇತರ ನಾಲ್ವರು ಕೃತ್ಯ ನಡೆಸಿದ್ದರು.

ವಿಟ್ಲ ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ತಡರಾತ್ರಿ ಅಂಗಡಿ ಬಂದ್ ಮಾಡುವುದೇಕೆ ಎಂದು ಪ್ರಶ್ನಿಸಿ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದರು.ಇದಲ್ಲದೆ ತಡೆಯಲು ಬಂದ ಅವರ ಪತ್ನಿಗೆ ಹಲ್ಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿತ್ತು.

ಟಾಪ್ ನ್ಯೂಸ್