ಬಂಟ್ವಾಳ;ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಗ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೆರುವಾಯಿ ಗ್ರಾಮದ 16 ವರ್ಷ ಪ್ರಾಯದ ಬಾಲಕಿ ಮೇಲೆ ಕೇರಳ ಭಾಗದ ಕೆಲವು ಯುವಕರು ಹಲವು ಸಮಯದಿಂದ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ವಿಟ್ಲ ಠಾಣೆಗೆ ಆಗಮಿಸಿದ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.