ವಿಟ್ಲ; ದಂಪತಿ ಆತ್ಮಹತ್ಯೆಗೆ ಯತ್ನ; ಪತಿ ಸಾವು, ಪತ್ನಿ ಸ್ಥಿತಿ ಗಂಭೀರ

ಬಂಟ್ವಾಳ:ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಡಾಜೆ ಬಾಕಿಲ ಎಂಬಲ್ಲಿ ನಡೆದಿದೆ ‌.

ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದವರು.ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮನೆಯಲ್ಲಿ ಇಬ್ಬರು ಆತ್ಮಹತ್ಯೆ ಯತ್ನಿಸಿದ್ದು ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಇವರಿಗೆ ಐದು ವರ್ಷದ ಅವಳಿ ಜವಳಿ ಇಬ್ಬರು ಮಕ್ಕಳಿದ್ದಾರೆ‌. ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ.

ಕೂಡಲೇ ಇವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಪ್ರತಾಪ್‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ವೀಣಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್