ವಿಟ್ಲ:ಕಾರು & ಟಿಪ್ಪರ್ ನಡುವೆ ಭೀಕರ ಅಪಘಾತ; ನಾಲ್ವರಿಗೆ ಗಾಯ

ವಿಟ್ಲ:ಕಾರು & ಟಿಪ್ಪರ್ ನಡುವೆ ಭೀಕರ ಅಪಘಾತ; ನಾಲ್ವರಿಗೆ ಗಾಯ

ವಿಟ್ಲ:ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾಗಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ.



ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಗಾಯಗೊಂಡಿದ್ದು,ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಿಂದಾಗಿ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜು- ಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.



ಟಾಪ್ ನ್ಯೂಸ್