ವಿಟ್ಲ; ಖಾಸಗಿ ಬಸ್ ಅಪಘಾತ, ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟು ಯುವತಿಗೆ ಗಂಭೀರ ಗಾಯ

ಬಂಟ್ವಾಳ;ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಧರೆಗೆ ಢಿಕ್ಕಿಯಾದ ಪರಿಣಾಮ ಓರ್ವ ಪ್ರಯಾಣಿಕ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ.

ವಿಟ್ಲದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸೆಲಿನಾ ಬಸ್ ಅಪಘಾತದ ವೇಳೆ ಬಸ್ ನ ಮುಂಭಾಗದ ಗಾಜು ಒಡೆದು ಯುವತಿ ಹೊರಕ್ಕೆ ಎಸೆಯಲ್ಪಟ್ಟಿದ್ದಾಳೆ.ಯುವತಿಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಉಳಿದಂತೆ ಅನೇಕ ಪ್ರಯಾಣಿಕರಿಗೂ ಗಾಯವಾಗಿದೆ.

ಜಾಯಿಂಟ್ ವೀಲ್ ಕಡಿತಗೊಂಡು ಅಪಘಾತ ಸಂಭವಿಸಿದೆ ಎಂದು ಚಾಲಕ ಹೇಳುತ್ತಿದ್ದಾನೆ.ಆದರೆ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com