ಬಿಜೆಪಿ ಸಂಸದನಿಂದ ಲೈಂಗಿಕ ಕಿರುಕುಳ; ಗಂಭೀರ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ ಭಾರತದ ಜನಪ್ರಿಯ ಕುಸ್ತಿಪಟುಗಳು

ನವದೆಹಲಿ;ಭಾರತದ ಮಹಿಳಾ ಕುಸ್ತಿಪಟುಗಳು ಬಿಜೆಪಿ ಸಂಸದ ಮತ್ತು ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ.

ಭಾರತದ ಮಹಿಳಾ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್, ಬಜರಂಗ್, ಸೋನಮ್ ಮಲಿಕ್ ಮತ್ತು ಅಂಶು ಅವರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಫೋಗಟ್ ಅವರು, ಮಹಿಳಾ ಕುಸ್ತಿಪಟುಗಳಿಗೆ ರಾಷ್ಟ್ರೀಯ ಶಿಬಿರಗಳಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಶರ್ಮಾ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಭೂಷಣ್, ನಾನು ರಾಜೀನಾಮೆ‌ ಕೊಡಲ್ಲ.ನನ್ನ ವಿರುದ್ಧದ ಆರೋಪ ಸಾಬೀತಾದರೆ ನಾನು ನೇಣಿಗೆ ಕೊರಳೊಡ್ಡಲು ಕೂಡ ರೆಡಿ ಇದ್ದೇನೆ.ಇದು ಸುಳ್ಳು ಆರೋಪ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್