ಇಂದೋರ್; ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶಶಿಕಾಂತ ಕಂಕಣೆ ಅವರು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಪ್ರೊ ವಿಮುಕ್ತ ಶರ್ಮಾ ಅವರ ಸಾವನ್ನು ಖಚಿತಪಡಿಸಿದ್ದಾರೆ
ಸೋಮವಾರ (ಫೆಬ್ರವರಿ 20) ಈ ಘಟನೆ ನಡೆದಿದ್ದು, ಆರೋಪಿ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ, 49 ವರ್ಷದ ಪ್ರಿನ್ಸಿಪಾಲ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಸಂತ್ರಸ್ತೆ ಕಾಲೇಜು ಕಟ್ಟಡದತ್ತ ಓಡಿದ ನಂತರ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಅವರಿಗೆ ಆಸ್ಪತ್ರೆಗೆ ಸಾಗಿಸಿದರು.
ಶೇಕಡ 90ರಷ್ಟು ಸುಟ್ಟ ಗಾಯಗಳೊಂದಿಗೆ ವಿಮುಕ್ತ ಶರ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಮೃತಪಟ್ಟಿದ್ದಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಅಶುತೋಷ್ ಪುಂಡಾಟಿಕೆಯಲ್ಲಿ ತೊಡಗಿದ್ದ ಕಾರಣ ಪ್ರಾಂಶುಪಾಲರು ಅವನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು, ಜೊತೆಗೆ ಅಂಕಪಟ್ಟಿ ತಡೆ ಹಿಡಿದಿದ್ದರು. ಇದರಿಂದ ಕೃತ್ಯ ನಡೆದಿದೆ ಎನ್ನಲಾಗಿದೆ.