ಯಾದಗಿರಿಯಲ್ಲಿ ವಿವಿಧ ಯೋಜನೆಗೆ ಶಂಕು ಸ್ಥಾಪನೆ ಮಾಡಿ ಪ್ರಧಾನಿ ಮೋದಿ ಭಾಷಣ

ಯಾದಗಿರಿ;ಯಾದಗಿರಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದು,ವಿವಿಧ ಯೋಜನೆಗಳ ಉದ್ಘಾಟನೆ ನೆರವೇರಿಸಿದರು.

ಕೊಡೇಕಲ್ ನಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಿದರು.

ಕುಡಿಯುವ ನೀರಿನ ಯೋಜನೆಯ ಜೊತೆಗೆ, ನಾರಾಯಣಪುರ ಎಡದಂಡೆ ಕಾಲುವೆ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಕರ್ನಾಟಕದ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ವಂದನೆಗಳು ಎಂದು ಕರ್ನಾಟಕದ ಜನರಿಗೆ ವಂದಿಸಿ ಭಾಷಣ ಮಾಡಿದ ಮೋದಿ ಮುಂದಿನ ಚುನಾವಣೆಯಲ್ಲಿ ನಮಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಿ. ನಿಮ್ಮಿಂದ ನನಗೆ ಕಳೆದ ಬಾರಿಯೂ ಅಧಿಕಾರ ಸಿಕ್ಕಿದೆ. ಜಿಲ್ಲೆಯಲ್ಲಿ ಅಭಿವೃದ್ಧಿಯ ಆಕಾಂಕ್ಷೆ ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್