ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ವೈರಲ್;ಯಾದಗಿರಿಯಲ್ಲಿ ಇಬ್ಬರ ಬಂಧನ

ಯಾದಗಿರಿ:ಪ್ರವಾದಿ ಮುಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದವರ ಶಿರಚ್ಛೇದ ಮಾಡುವುದಾಗಿ ಬೆದರಿಸಿದ ಆರೋಪದ ಮೇಲೆ ಇಬ್ಬರನ್ನು ಯಾದಗಿರಿ ಜಿಲ್ಲೆಯಲ್ಲಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ಆಶನಾಳ ಗ್ರಾಮದ ನಿವಾಸಿ 23 ವರ್ಷದ ಅಕ್ಬರ್ ಸೈಯದ್ ಬಹದ್ದೂರ್ ಅಲಿ ಮತ್ತು ಯಾದಗಿರಿ ಸಮೀಪದ ಹತ್ತಿಕುಣಿ ಕ್ರಾಸ್ ನಿವಾಸಿ 21 ವರ್ಷದ ಮೊಹಮ್ಮದ್ ಅಯಾಜ್ ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಯಾದಗಿರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತ ಪ್ರಚೋದನಾಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.ಇದರ ಬೆನ್ನಲ್ಲೇ ಪೊಲೀಸರಿಗೆ ಕೆಲವರು ವಿಡಿಯೊ ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದರು.

ಟಾಪ್ ನ್ಯೂಸ್