ಪ್ಲೆಕ್ಸ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಯುವಕರು ಮೃತ್ಯು

ಗದಗ:ನಟ ಯಶ್ ಅವರ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ 3 ಯುವಕರು ಸಾವನ್ನಪ್ಪಿದ ಘಟನೆ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ‌. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್, ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದೇವೆ ಎಂದರು.

ಫ್ಲೆಕ್ಸ್ ಹಾಕುವಾಗ ಮೃತಪಟ್ಟಿರುವ ಮೂವರು ಅಭಿಮಾನಿಗಳ ಕುಟುಂಬಸ್ಥರನ್ನು ಭೇಟಿ ಮಾಡಲು ನಟ ಯಶ್ ಗದಗ ಜಿಲ್ಲೆಗೆ ತೆರಳಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್