-ಮಹಮ್ಮದ್ ಆಸಿಫ್ ಬಂಧಿತ
ಉಡುಪಿ:ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ಯುವಕನೋರ್ವನಿಗೆ ಬಂಧಿಸಿದ ಬಗ್ಗೆ ವರದಿಯಾಗಿದೆ.
ಮಂಗಳೂರು ಬಜ್ಪೆ ನಿವಾಸಿ ಮಹಮ್ಮದ್ ಆಸಿಫ್ (32) ಬಂಧಿತ ಆರೋಪಿ.ಆಸಿಫ್ ಗೆ ಕಾಪು ಪೊಲೀಸರು ಜೂ. 22ರಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಕಳೆದ ವರ್ಷ ಕರಾವಳಿಯಲ್ಲಿ ಹಿಜಾಬ್ ವಿವಾದದ ವೇಳೆ ಯಶಪಾಲ್ ಸುವರ್ಣ ಅವರಿಗೆ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯೊಡ್ಡಿದ್ದರು ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಆರೋಪಿಗಳನ್ನು ಬಂಧಿಸುವಂತೆ ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಕಾಪು ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಸಮೀಪದ ಕೆಂಜಾರು ನಿವಾಸಿ ಮಹಮ್ಮದ್ ಶಾಫಿ (26)ನ್ನು ಈ ಮೊದಲು ಪೊಲೀಸರು ಬಂಧಿಸಿದ್ದರು.
ಇದೀಗ ಆಸಿಫ್ ವಿದೇಶದಿಂದ ಮುಂಬಯಿ ವಿಮಾನ ನಿಲ್ದಾಣಕ್ಕೆ ಬರುವ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧನದ ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದು ಆಸಿಫ್ ಗೆ ಒಂದು ದಿನ ಪೊಲೀಸ್ ಕಸ್ಟಡಿ ನೀಡಲಾಗಿದೆ.