ಉಡುಪಿ; ಸಂಘಪರಿವಾರದ ಮುಖಂಡ ಯಶ್ಫಾಲ್‌ ಸುವರ್ಣ ಸೇರಿದಂತೆ ಐವರ ವಿರುದ್ಧ FIR ದಾಖಲು; ಏನಿದು ಪ್ರಕರಣ?

ಉಡುಪಿ:ಮಹಾಲಕ್ಷ್ಮಿ ಕೋಪರೇಟಿವ್‌ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಪರಿವಾರದ ಮುಖಂಡ ಯಶ್ಫಾಲ್‌ ಸುವರ್ಣ ಸೇರಿದಂತೆ ಐವರ ವಿರುದ್ಧ FIR ದಾಖಲಿಸಲಾಗಿದೆ.

ಮೃತ ಸುಬ್ಬಣ್ಣನವರ ಸಹೋದರ ಸುರೇಶ್‌ ಅವರು ನೀಡಿದ ದೂರಿನಂತೆ ಸಂಘಪರಿವಾರದ ಮುಖಂಡ ಯಶಪಾಲ್‌ ಸುವರ್ಣ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಮೊಗವೀರ, ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಕೆ.ಸೀನಾ ಗಂಗೊಳ್ಳಿ, ಮ್ಯಾನೇಜರ್‌ ಸಾರಿಕಾ, ಸಾಲಗಾರ ರಿಯಾಝ್‌ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಮೃತದೇಹದ ಬಳಿ ಡೆತ್ ನೋಟ್ ದೊರಕಿದ್ದು, ಸಾವಿಗೆ ಬ್ಯಾಂಕಿನ ಆಡಳಿತ ಮಂಡಳಿಯ ಒತ್ತಡ ಮೇಲಾಧಿಕಾರಿಯ ಅಸಹಕಾರದ ಬಗ್ಗೆ ಬರೆಯಲಾಗಿತ್ತು ಎನ್ನಲಾಗಿದೆ‌.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com