ಬೆಂಗಳೂರು;ಪಕ್ಷದ ಸೂಚನೆ ಮೇರೆಗೆ ಯಡಿಯೂರಪ್ಪ ಬಗ್ಗೆ ನಾನು ಮಾತನಾಡುವುದಿಲ್ಲ, ಅವರ ಜೊತೆಗಿನ ರಾಜಕೀಯ ಸಂಘರ್ಷಕ್ಕೆ ಪೂರ್ಣ ವಿರಾಮ ಹಾಕುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಯಡಿಯೂರಪ್ಪ ಬಗ್ಗೆ ನನಗೆ ಪ್ರಶ್ನೆಗಳನ್ನು ಕೇಳಬೇಡಿ, ಅವರ ಬಗ್ಗೆ ಅಪಾರ ಗೌರವ ಇದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.ಯಡಿಯೂರಪ್ಪ ಹಿರಿಯರು, ಅವರ ಬಗ್ಗೆ ಮಾತನಾಡಬೇಡಿ ಎಂದು ಹೈಕಮಾಂಡ್ ಸೂಚಿಸಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಚಿಲ್ಲರೆ ರಾಜಕಾರಣಿಗಳ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಹೈಕಮಾಂಡ್ ಸೂಚಿಸಿದೆ ಎಂದ ಯತ್ನಾಳ್
ನನಗೆ ನೋಟಿಸ್ ಕೊಟ್ಟಿದ್ದಾರೆ ಎನ್ನುವುದು ಸುಳ್ಳು ಎಂದು ಹೇಳಿದ್ದಾರೆ.